ವಿಷಯಕ್ಕೆ ಹೋಗು

ಅರಿವನರಿದು ಮರಹ ಮರೆದು,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಿವನರಿದು ಮರಹ ಮರೆದು
ಸಂಕಲ್ಪ ಸಂಶಯವಳಿದ ನಿಲವನು
ಅರಿದ ಪರಿ ಎಂತು ಹೇಳಾ ? ಅರಿದೆನೆಂದಡೆ ಜ್ಞಾನಕ್ಕೆ ದೂರ
ಮರೆದೆನೆಂದಡೆ ಮನಕ್ಕೆ ದೂರ. ನಿರ್ಭಾವದ ಹೊಲಿಗೆಯಲ್ಲಿ ಭಾವಸಂಕಲ್ಪ ಬಿಡದು. ನಮ್ಮ ಗುಹೇಶ್ವರಲಿಂಗದಲ್ಲಿ ಮನಮಗ್ನಯೋಗ
ನಿನಗೆಂತು ಸಾಧ್ಯವಾಯಿತ್ತು ಹೇಳಾ ಸಿದ್ಧರಾಮಯ್ಯಾ ?