ಮನ ಬಸಿರಾದಡೆ ಕೈ ಬೆಸಲಾಯಿತ್ತ ಕಂಡೆ ! ಕರ್ಪುರದ ಕಂಪ ಕಿವಿ ಕುಡಿಯಿತ್ತ ಕಂಡೆ ! ಮುತ್ತಿನ ಢಾಳವ ಮೂಗು ನುಂಗಿತ್ತ ಕಂಡೆ ! ಕಂಗಳು ಹಸಿದು ವಜ್ರವ ನುಂಗಿತ್ತ ಕಂಡೆ ! ಒಂದು ನೀಲದೊಳಗೆ ಮೂರುಲೋಕವಡಗಿತ್ತ ಕಂಡೆ ಗುಹೇಶ್ವರಾ