ಸುತ್ತಿಸುತ್ತಿ ಬಂದಡಿಲ್ಲ ಲಕ್ಷ ಗಂಗೆಯ ಮಿಂದಡಿಲ್ಲ. ತುಟ್ಟ ತುದಿಯ ಮೇರುಗಿರಿಯ ಮೆಟ್ಟಿ ಕೂಗಿದಡಿಲ್ಲ. ನಿತ್ಯನೇಮದಿಂದ ತನುವ ಮುಟ್ಟಿಕೊಂಡಡಿಲ್ಲ. ನಿಚ್ಚಕ್ಕಿನ ಗಮನವಂದಂದಿಗೆ; ಅತ್ತಲಿತ್ತ ಹರಿವ ಮನವ ಚಿತ್ರದಲಿ ನಿಲಿಸಬಲ್ಲಡೆ ಬಚ್ಚಬರಿಯ ಬೆಳಗು ಗುಹೇಶ್ವರನೆಂಬ ಲಿಂಗವು.