ಲೋಕದವರನೊಂದು ಭೂತ ಹಿಡಿದಡೆ ಆ ಭೂತದಿಚ್ಛೆಯಲ್ಲಿ ನುಡಿವುತ್ತಿಪ್ಪರು. ಲಾಂಛನ ಧಾರಿ ವೇಷವ ಧರಿಸಿ ಆಸೆಯಿಂದ ಘಾಸಿಯಾಗಲೇಕಯ್ಯಾ ? ಆನೆಯ ಚೋಹವ ತೊಟ್ಟು ನಾಯಾಗಿ ಬೊಗಳುವ ಮಾನವರನೇನೆಂಬೆ ಗುಹೇಶ್ವರಾ ?