ಬೆಟ್ಟಕ್ಕೆ ಬೆಳ್ಳಾರ ಸುತ್ತಿತಯ್ಯಾ ಪಾಪದ ಬಲೆಯ ತಂದು ಮುಂದೆ ಒಡ್ಡಿದಿರಯ್ಯಾ ಬೇಟೆಗಾರನು ಮೃಗವನಟ್ಟಿ ಬರಲು ಮೃಗವು ಗೋರಿಗೊಳಗಾಗದಯ್ಯಾ. ಹರನೊಡ್ಡಿದ ಬಲೆಯಲ್ಲಿ ಸಿಲುಕಿದ ಮೃಗವು ಕೂಡಲಸಂಗಮದೇವಂಗೆ ಓಗರವಾಯಿತ್ತು.