ಎನ್ನ ಕಾಯವೆಂಬ ಸಿಂಹಾಸನದಲ್ಲಿ ಪ್ರಾಣವೆಂಬ ಲಿಂಗವ ಮೂರ್ತಗೊಳಿಸಿ ಧ್ಯಾನವೆಂಬ ಹಸ್ತದಲ್ಲಿ ಮುಚ್ಚಿ ಪೂಜಿಸುತಿರಲು ಮೆಲ್ಲಮೆಲ್ಲನೆ ಸುತ್ತಿ ಮುತ್ತಿದ ಸಂಸಾರ ಬಯಲ ಬೆರಸಿ ನಾ ನೀನೆಂಬ ಭೇದವಳಿದು ಮಹಾದಾನಿ ಗುಹೇಶ್ವರನ ನೋಡಲಾಗಿ ನಿಜಲಿಂಗವಾಯಿತ್ತು.