ಅದ್ವೈತವೆಂಬ ಶಿಶುವೆನ್ನ ಕರಸ್ಥಲವ

ವಿಕಿಸೋರ್ಸ್ದಿಂದ



Pages   (key to Page Status)   


ಅದ್ವೈತವೆಂಬ ಶಿಶುವೆನ್ನ ಕರಸ್ಥಲವ ಸೋಂಕಲೊಡನೆ ಎನ್ನ ತನ್ನಂತೆ ಮಾಡಿತ್ತಾಗಿ
ಎನ್ನ ನಾನೆಂಬ ವಿಚಾರವು ಅರತು ಹೋಯಿತ್ತು ಕೇಳಾ. ಮತ್ತೆ ಅನ್ಯವಿಚಾರವನೆಂತೂ ಅರಿಯೆನು. ಎನ್ನ ಪೂರ್ವಾಪರವ ನಿಮ್ಮಿಂದಲರಿಯಲೆಂದು ಬಂದು ನಿಮ್ಮ ಮರೆಹೊಕ್ಕೆನಾಗಿ
ಸಂಗನಬಸವಣ್ಣನ ಮಹಿಮೆಯ ನಾನೆತ್ತ ಬಲ್ಲೆನು ? ಗುಹೇಶ್ವರನ ಸಾಕ್ಷಿಯಾಗಿ ಸಂಗನಬಸವಣ್ಣ ನಿನ್ನ ಅಂತರಂಗದೊಳಗೆ ಬೆಳಗುತ್ತೈದಾನೆ. ಎನಗೊಮ್ಮೆ ಬಸವಣ್ಣನ ಘನವ ತಿಳುಹಿ ಕೊಡಾ ಚೆನ್ನಬಸವಣಾ