ಆಚಾರವೆಂಬ ಬಿಲ್ಲಿಗೆ ವಿಚಾರವೆಂಬ ನಾರಿ ಸಮತೆಯೆಂಬ ತಿರುವ ಮೆಟ್ಟಿ ಜೇವೊಡೆಗೆಯ್ದು ಶಿಷ್ಯನೆಂಬ ಬಾಣವ ತೊಡಚಿ ಗುರುವೆಂಬ ವ್ಯಾಧನು ಲಿಂಗವೆಂಬ ಬಯಲ ಗುರಿಯನೆಚ್ಚಡೆ ಗರಿ ತೋರದಂತೆ ಮುಳುಗಿ ಅಡಗಿತ್ತು. ಆ ಗರಿಯನು ಬಾಣವನು ಅರಸಲುಂಟೆ ಕೂಡಲಚೆನ್ನಸಂಗಾ ನಿಮ್ಮಲ್ಲಿ ?