ತಂದೆಯ ಸದಾಚಾರ ಮಕ್ಕಳೆಂಬರು ಗುರುಮಾರ್ಗಾಚಾರ ಶಿಷ್ಯನದೆಂಬರು. ಮೇಲು ಪಂಕ್ತಿಯ ಕಾಣರು ನೋಡಾ. ತತ್ವದ ಮೇಲು ಪಂಕ್ತಿ ಅತ್ತಲೆ ಉಳಿಯಿತ್ತು. ಕತ್ತಲೆಯ ಮರೆಯಲ್ಲಿ ಕಾಣರು ನೋಡಾ. ತತ್ವದ ಹಾದಿಯನು ಭಕ್ತಿಯ ಭೇದವನು ಇವರೆತ್ತ ಬಲ್ಲರಯ್ಯಾ ಗುಹೇಶ್ವರಾ