ತಲೆ ಇಲ್ಲದ ತಲೆಯಾತಂಗೆ ಕರುಳಿಲ್ಲದ ಒಡಲು ನೋಡಾ! ಆ ನಲ್ಲಂಗೆ ಅಂಗವಿಲ್ಲದ ಅಂಗನೆ ಸತಿಯಾಗಿಪ್ಪಳು! ಇವರಿಬ್ಬರ ಬಸುರಲ್ಲಿ ಹುಟ್ಟಿದಳೆಮ್ಮ ತಾಯಿ ನಾ ಹುಟ್ಟಿ ತಾಯ ಕೈವಿಡಿದು ಸಂಗವ ಮಾಡಿ ನಿರ್ದೋಷಿಯಾದೆನು ಕಾಣಾ ಗುಹೇಶ್ವರಾ.