ಸಮುದ್ರದೊಳಗೆ ನೊರೆ ತೆರೆಗಳು ನೆಗಳ್ದವೆಂದಡೆ ತಾ ಸಮುದ್ರದಿಂದ ಅನ್ಯವಪ್ಪವೆ ? ನಿರ್ವಿಕಾರ ನಿತ್ಯ ನಿರಂಜನ ನಿರ್ಗುಣ ಪರಿಪೂರ್ಣ ನಿರ್ವಿಕಲ್ಪ ಪರಬ್ರಹ್ಮಶಿವನಿಂದ ಜಗತ್ತು ಉದಯಿಸಿತ್ತು ಎಂದಡೆ ಶಿವನಿಂದ ಅನ್ಯವೆನಬಹುದೆ ? ಇಂತಪ್ಪ ಅರಿವು ನೀವು ಕೊಟ್ಟ ಸಮ್ಯಕ್ ಜ್ಞಾನಕ್ಕೆ ಅರಿದಪ್ಪುದಯ್ಯಾ ಗುಹೇಶ್ವರಾ