ಆದಿಯ ಲಿಂಗ ನಿನ್ನಿಂದ ಎನಗಾಯಿತ್ತು. ಅನಾದಿಯ ಜ್ಞಾನ ನಿನ್ನ ನೆನೆದಡೆ ಎನಗಾಯಿತ್ತು. ನಿನ್ನ ಕೃಪೆಯಿಂದ ಪ್ರಾಣ ಲಿಂಗವೆಂದರಿದೆನೆಂಬುದ ನಿಮ್ಮ ಪ್ರಮಥರೆ ಬಲ್ಲರು. ಗುಹೇಶ್ವರ ಸಾಕ್ಷಿಯಾಗಿ ಸಂಗನಬಸವಣ್ಣ ನಿನ್ನ ಪ್ರಸಾದದ ಶಿಶು ನಾನು ನೋಡಯ್ಯಾ.