ಧರೆಯ ಮೇಲುಳ್ಳ ಅರುಹಿರಿಯರೆಲ್ಲರೂ ಮರುಳುಗೊಂಡಾಡುತ್ತಿದ್ದಾರೆ ನೋಡಾ. ಮಂಜಿನ ಮಡಕೆಯೊಳಗೆ ರಂಜನೆಯ ಭಂಡವ ತುಂಬಿ ಅಂಜದೆ ಪಾಕವ ಮಾಡಿಕೊಂಡು ಉಂಡು ಭಂಡವ ಮಾರುತ್ತಿರ್ಪರು ನೋಡಾ. ಸಂಜೀವನಿಯ ಬೇರೆ ಕಾಣದೆ ಮರಣಕ್ಕೊಳಗಾದರು ಗುಹೇಶ್ವರನನರಿಯದ ಭವಭಾರಕರೆಲ್ಲರು.