ಖಂಡಾಖಂಡ ಸಂಯೋಗವಿಲ್ಲದ ಅಖಂಡಿತನ ನಿಲವು ತನ್ನಲ್ಲಿ ಅಲ್ಲದೆ ಮತ್ತೆಲ್ಲಿಯೂ ಇಲ್ಲ. ಬಯಲ ಹಿರಿಯರು ಬಯಲನೆ ಅರಸುವರು. ಅಲ್ಲಿ ಉಂಟೆ ಹೇಳಾ ಗುಹೇಶ್ವರಾ?