ತಲೆಯಿಲ್ಲದ ಅಟ್ಟೆ ಜಗವ ನುಂಗಿತ್ತು. ಅಟ್ಟೆಯಿಲ್ಲದ ತಲೆ ಆಕಾಶವ ನುಂಗಿತ್ತು. ಅಟ್ಟೆ ಬೇರೆ ತಲೆ ಬೇರಾದಡೆ_ಮನ ಸಂಚಲಿಸುತ್ತಿದ್ದಿತ್ತು ! ಅಟ್ಟೆಯನೂ ತಲೆಯನೂ ಬಯಲು ನುಂಗಿದಡೆ ಅನು ನುಂಗಿದೆನು ಗುಹೇಶ್ವರನಿಲ್ಲದಂತೆ !