Pages(key to [[Help:Page Status{{!}}Page Status]])
ಪರಮಜ್ಞಾನವೆಂಬ ಸಸಿಗೆ ಗುರುಭಕ್ತಿ ಎಂಬ ಭೂಮಿಯ ಮಣ್ಣ ತಂದು ಪಾತೆಯ ಕಟ್ಟಿದೆ ಲಿಂಗಭಕ್ತಿ ಎಂಬ ಗೊಬ್ಬರವ ತುಂಬಿದೆ ಜಂಗಮಭಕ್ತಿ ಎಂಬ ಪರಮಾನಂದದ ಜಲವ ನೀಡಿದೆ. ಇಂತಿವರಿಂದ ಭಕ್ತಿವೃಕ್ಷ ಫಲವ ಧರಿಸೆ ಗುಹೇಶ್ವರಲಿಂಗದಲ್ಲಿ ಮುಕ್ತನಾದೆನು ಕಾಣಾ ಸಂಗನಬಸವಣ್ಣಾ.