ಬಂದ ಬಟ್ಟೆಯ ನಿಂದು

ವಿಕಿಸೋರ್ಸ್ದಿಂದ



Pages   (key to Page Status)   


ಬಂದ ಬಟ್ಟೆಯ ನಿಂದು ನೋಡದೆ
ಬಂದ ಬಟ್ಟೆಯ ಕಂಡು ಸುಖಿಯಾದೆ. ನಿಂದ ನಿಲುವ ಮುಂದುಗೆಡಿಸಿ
ನಿಂದನಿಲವ ಮುಂದುಗೊಂಡಿತ್ತು. ತಂದೆ ಮಕ್ಕಳ ಗುಣ ಒಂದು ಭಾವದೊಳಡಗಿ
ಸಂದಿಲ್ಲದ ಕಾಲೊಳಗೆ ಕೈ ಮೂಡಿತ್ತು. ಒಂದೊಂದನೆ (ಒಂದನೆ ?) ಹಿಡಿದು ಒಂದೊಂದನೆ (ಒಂದನೆ ?) ಬಿಟ್ಟಡೆ_ ಇದು ನಮ್ಮ ಗುಹೇಶ್ವರನ ಸದ್ಭಕ್ತಿಯಾಯಿತ್ತೈ ಸಂಗನಬಸವಣ್ಣಾ