Pages(key to [[Help:Page Status{{!}}Page Status]])
ಪಂಚಮಹಾಪಾತಕವಾವುದೆಂದರಿಯರು _ ಭವಿಯ ತಂದು ಭಕ್ತನ ಮಾಡೂದು ಪ್ರಥಮ ಪಾತಕ. ಭಕ್ತರಿಗೆ ಶರಣೆಂಬುದು ದ್ವಿತೀಯ ಪಾತಕ ಗುರುವೆಂಬುದು ತೃತೀಯ ಪಾತಕ. ಗುರು ಲಿಂಗ ಜಂಗಮದ ಪ್ರಸಾದವ ಕೊಂಡಡೆ ನಾಲ್ಕನೆಯ ಪಾತಕ. ಗುಹೇಶ್ವರಲಿಂಗದಲ್ಲಿ ಹಿರಿದು ಭಕ್ತಿಯ ಮಾಡೂದು ಪಂಚಮ ಪಾತಕ !