ಮಥನದ ಲೀಲೆಯಲ್ಲಿ ಹುಟ್ಟುವುದೇ ಬ್ರಹ್ಮವು ? ಶ್ರುತಿ ಸ್ಮೃತಿಗಳಿಗೆ ಅಳವಡದು ನೋಡಾ ! ಪೃಥ್ವಿಯೊಳಗಿಲ್ಲದ ಅಚಲವಪ್ಪ ಘನವನು ಸಚರಾಚರದಲ್ಲಿ ಭರಿತವೆಂತೆಂಬೆ ? ಇಲ್ಲದ ಲಿಂಗವನಲ್ಲಲ್ಲಿಗೆ ಉಂಟುಮಾಡುವ ಈ ಲೀಲೆಯ ವಾರ್ತೆ ಎಲ್ಲಿಯದೊ ಗುಹೇಶ್ವರಾ ?