ಮನಕ್ಕೆ ಮನ ಏಕಾರ್ಥವಾಗಿ ಕಾಯಕ್ಕೆ ಕಾಯ ಸಮದರ್ಶನವಾಗಿ ಪ್ರಾಣಕ್ಕೆ ಪ್ರಾಣ ಸಮಕಳೆಯಾಗಿ ಇದ್ದವರಲ್ಲಿ_ ಮನ ವಚನ ಕಾಯದಲ್ಲಿ ಶಬ್ದಸೂತಕ ಹುಟ್ಟಿದಡೆ ಸೈರಿಸಬಾರದು ಕೇಳಾ. ನಮ್ಮ ಗುಹೇಶ್ವರಲಿಂಗದಲ್ಲಿ ನೀನು ಭಕ್ತನಾದ ಕಾರಣ ಮುಳಿಸು ಮೊಳೆದೋರಿತ್ತು ಕಾಣಾ ಸಂಗನಬಸವಣ್ಣಾ.