ಅರೂಪು ಕಾಣಬಾರದು ಪೂಜಿಸುವ ಪರಿ ಇನ್ನೆಂತೊ ? ರೂಪಿಂಗೆ ಕೇಡುಂಟು ಪೂಜಿಸುವ ಪರಿ ಇನ್ನೆಂತೊ ? ಸಕಲ ನಿಷ್ಕಲ ಪೂಜೆಗೆ ಕಾರಣವಲ್ಲ ! ಇನ್ನೆಂತಯ್ಯಾ ಲಿಂಗವಂತರಿಗೆ ಪೂಜಿಸುವ ಪರಿ ? ಲಿಂಗದ ಪರಿ ಇನ್ನೆಂತಯ್ಯಾ ? ಅರಿಯಬಾರದ ಲಿಂಗವನು ಅರಿವಂತೆ ಮಾಡಿಕೊಟ್ಟನು ಶ್ರೀಗುರು. ಈ ಎರಡುವನರಿದು ಪೂಜಿಸಬೇಕು ಗುಹೇಶ್ವರಾ.