ವಿಷಯಕ್ಕೆ ಹೋಗು

ಕಾಯವಿಡಿದು ಲಿಂಗವಿದೆ ಲಿಂಗವಿಡಿದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾಯವಿಡಿದು ಲಿಂಗವಿದೆ ಲಿಂಗವಿಡಿದು ಕಾಯವಿದೆ. ಅರಿವಿಡಿದು ಮರಹಿದೆ
ಮರಹುವಿಡಿದು ತೋರುವ ಅರಿವಿದೆ. ಲಿಂಗಾಂಗವೆರಡೂ ನಿಮ್ಮಲ್ಲಿ ಐಕ್ಯವಾದ ಪರಿ ಎಂತು ಹೇಳಾ ? ಸ್ವರವಿಡಿದು ಸಬುದ ಸಮರಸವಾದ ಪರಿ ಎಂತು ಹೇಳಾ ? `ದೇವ' `ಭಕ್ತ' ಎಂಬ ನಾಮ ಸೀಮೆಯಡಗಿ ಗುಹೇಶ್ವರಲಿಂಗದಲ್ಲಿ ತದುಗತವಾಗಿದ್ದ ಪರಿ ಎಂತು ಹೇಳಾ ಸಂಗನಬಸವಣ್ಣಾ ?