ಭೂತವೈದರಿಂದ ಸ್ಥೂಲ ತನು. ಮನ ಬುದ್ಧಿ ಚಿತ್ತ ಅಹಂಕಾರದಿಂದ ಸೂಕ್ಷ್ಮತನು. ಭಾವಜ್ಞಾನದಿಂದ ಕಾರಣತನು._ಈ ತ್ರಿವಿಧವು ಚೈತನ್ಯವಿಡಿದ ಕಾರಣ
ಭೂತ ಅಂತಃಕರಣ ಭಾವ ಜ್ಞಾನಕ್ಕೆ ಸ್ವತಂತ್ರತೆಯಿಲ್ಲ. ಆ ಚೈತನ್ಯಕ್ಕೆ ಶರೀರಭಾವವಿಲ್ಲದಿರ್ದಡೆ ತೋರಿಕೆ ಇಲ್ಲವಾಗಿ ಆ ಚೈತನ್ಯವೆ ತನ್ನ ಲೀಲೆಯಿಂದ ಶರಣನೆನಿಸಿತ್ತು. ಆ ಶರಣನ ಪಂಚಭೌತಿಕ ತನುವ ಇಷ್ಟಲಿಂಗ ಇಂಬುಗೊಂಡಿಹ ಕಾರಣ
ಕಾಯ ಪಂಚಬ್ರಹ್ಮಮಯವಾಯಿತ್ತು. ಅಂತಃಕರಣ[ವ] ಅಂತಃಪ್ರೇರಕ ಪ್ರಾಣಚೈತನ್ಯಲಿಂಗವೊಳಕೊಂಡ ಕಾರಣ ಶರಣನ ಕರಣಂಗಳೆ ಲಿಂಗಕಿರಣಂಗಳಾದವು. ಭಾವ ಜ್ಞಾನವೆಡೆಗೊಂಡು [ಲಿಂಗ] ತೃಪ್ತಿಸ್ವರೂಪದಿಂದ ಆನಂದಮಯವಪ್ಪ ಕಾರಣ
ಶರಣ ಸಚ್ಚಿನ್ಮಯನಾದ_ಇದು ಕಾರಣ
ಗುಹೇಶ್ವರಾ ನಿಮ್ಮ ಶರಣರ ದೃಷ್ಟಲಿಂಗವೆಂಬೆ !