ಕಲ್ಲ ಹೋರಿನೊಳಗೊಂದು ಕಿಚ್ಚು ಹುಟ್ಟಿತ್ತ ಕಂಡೆ. ಹುಲ್ಲ ಮೇವ ಎರಳೆಯ ಹುಲಿಯ ಸರಸವ ಕಂಡೆ ಎಲ್ಲರೂ ಸತ್ತು ಆಡುತ್ತಿಪ್ಪುದ ಕಂಡೆ. ಇನ್ನು ಎಲ್ಲಿಯ ಭಕುತಿ ಹೇಳಾ ಗುಹೇಶ್ವರಾ ?