ಗುರುವಿನ ಪ್ರಾಣ ಲಿಂಗದಲ್ಲಿ ಲೀಯವಾದ ಬಳಿಕ ಆ ಲಿಂಗವೆನ್ನ ಕರಸ್ಥಲಕ್ಕೆ ಬಂದಿತ್ತು ನೋಡಾ. ಇದ್ದಾನೆ ನೋಡಾ ಎನ್ನ ಗುರು ಅನಿಮಿಷನು ಎನ್ನ ಕರಸ್ಥಲದಲ್ಲಿ. ಇದ್ದಾನೆ ನೋಡಾ ಎನ್ನ ಗುರು ಅನಿಮಿಷನು ಎನ್ನ ಜ್ಞಾನದೊಳಗೆ. ಇದ್ದಾನೆ ನೋಡಾ ಎನ್ನ ಗುರುವಿನ ಗುರು ಪರಮಗುರು ಬಸವಣ್ಣ ಎನ್ನ ಕಂಗಳ ಮುಂದೆ ! ಗುಹೇಶ್ವರ ಸಾಕ್ಷಿಯಾಗಿ
ಎನ್ನ ಮೇಲೆ ದ್ರೋಹವಿಲ್ಲ ಕಾಣಾ ಚನ್ನಬಸವಣ್ಣಾ !