ಹಿರಿದಪ್ಪ ಜಲಧಿಯ ಮಡುವಿನೊಳಗೆ,

ವಿಕಿಸೋರ್ಸ್ದಿಂದ



Pages   (key to Page Status)   


ಹಿರಿದಪ್ಪ ಜಲಧಿಯ ಮಡುವಿನೊಳಗೆ
ಕರಿಯ ಕಬ್ಬಿಲ ಜಾಲವ ಬೀಸಿದ ನೋಡಯ್ಯಾ. ಅರಿದ ತಲೆ ಐದು
ಅರಿಯದ ತಲೆ ಐದು
ಕರಿಯ ತಲೆ ಐದು
ಮುಂದೈದಾವೆ ನೋಡಯ್ಯಾ. ಕರಿಯ ಕಬ್ಬಿಲ ಜಾಲವ ಹೊತ್ತುಕೊಂಡು ಹೋದಡೆ ನೇತ್ರದಲೋಕುಳಿಯಾಡಿತ್ತ ಕಂಡೆನು ಗುಹೇಶ್ವರಾ.