ಪೂರ್ವಗುಣವನೆಲ್ಲ ಅಳಿದು ಪುನರ್ಜಾತನಾದ

ವಿಕಿಸೋರ್ಸ್ದಿಂದ



Pages   (key to Page Status)   


ಪೂರ್ವಗುಣವನೆಲ್ಲ ಅಳಿದು ಪುನರ್ಜಾತನಾದ ಬಳಿಕ ಗುರುವಿನ ಕರಸ್ಥಲದಲ್ಲಿ ಉತ್ಪತ್ತಿ ಸದ್ಭಕ್ತರಲ್ಲಿ ಸ್ಥಿತಿ ಲಿಂಗದಲ್ಲಿ ಲಯ_ ಇಂತೀ ನಿರ್ಣಯವನರಿಯದೆ; ಶೀಲವಂತರ ಶೀಲ ತಪ್ಪಿದಡೆ ಹೇಳಬಹುದೆ ? ಹೇಳಬಾರದು. ಸೂಳೆ ಮುತ್ತು ಗೊರವಿತಿಯಾದಂತೆ
ಬಂಟ ಮುತ್ತು ಬಾಗಿಲಕಾಯ್ದಂತೆ
ನರಿ ಮುತ್ತು ಬಳ್ಳಾದಂತೆ
ಹಾವು ಮುತ್ತು ಸಿಂಗಿಯಾದಂತೆ ! ಎಲ್ಲ ದೇವರಿಗೆ ಮಸ್ತಕ ಪೂಜೆ ಜಂಗಮದೇವರಿಗೆ ಪಾದಪೂಜೆ. ಪಾದೋದಕ ಪ್ರಸಾದವ ಕೊಡುವ ಜಂಗಮದೇವರು
ಕÀಂಠಪಾವಡ ಧೂಳಪಾವಡ ಸರ್ವಾಂಗಪಾವಡ ಶೀಲಸಂಬಂಧವೆಂದಡೆ ಕೇಸರಿ ಶುನಕನಾದಂತೆ ಕಾಣಾ ಗುಹೇಶ್ವರಾ.