ಕಸ್ತೂರಿಯ ಮೃಗ ಬಂದು ಸುಳಿಯಿತ್ತಯ್ಯಾ
ಸಕಲ ವಿಸ್ತಾರದ ರೂಹು ಬಂದು ನಿಂದಿತ್ತಯ್ಯಾ
ಆವ ಗ್ರಹ ಬಂದು ಸೋಂಕಿತ್ತೆಂದರಿಯೆನಯ್ಯಾ ಆವ ಗ್ರಹ ಬಂದು ಹಿಡಿಯಿತ್ತೆಂಬುದ ನಾನರಿಯೆನಯ್ಯಾ. ಹೃದಯಕಮಲಮಧ್ಯದಲ್ಲಿ ಗುರುವನರಿದು ಪೂಜಿಸಿ
ಗುರು ವಿಖ್ಯಾತನೆಂಬುದ ನಾನರಿದೆನಯ್ಯಾ. ಗುಹೇಶ್ವರಲಿಂಗದಲ್ಲಿಹಿಂದಣ ಹುಟ್ಟರತು ಹೋದುದ ಕಂಡೆನಯ್ಯಾ.