ಲಿಂಗ ನಿಮ್ಮದಾದಡೆ ನಿಮ್ಮ ಅಂಗೈಯೊಳಗೇಕೆ ಅಡಗದು ? ನಿಮ್ಮ ಅಂಗಮಯ ಲಿಂಗವಾದಡೆ ಸಂಸಾರದ ಅಂಗವ ಉಲುಹೇತಕ್ಕೆ ? ಅದು ನಮ್ಮ ಗುಹೇಶ್ವರಲಿಂಗದಲ್ಲಿ ಲಿಂಗದ ಮೆಚ್ಚಲ್ಲವೆಲೆ ಭ್ರಾಂತು ಯೋಗಿ ಘಟ್ಟಿವಾಳಯ್ಯ.