ವಿಷಯಕ್ಕೆ ಹೋಗು

ಯುಗದ ಉತ್ಸಾಹವ (ಉತ್ಸವವ?)

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಯುಗದ ಉತ್ಸಾಹವ (ಉತ್ಸವವ?) ನೋಡಿರೆ ! ಪಂಚಶಕ್ತಿಗಳಿಗೆ ಪಂಚಪ್ರಧಾನರು. ಅವರ ಆಗುಹೋಗನು ಆ ಶರಣನೆ ಬಲ್ಲ. ಆ ಶರಣನು ತಾನು ತಾನಾಗಿ ಆರು ದರುಶನಕ್ಕೆ ಯಾಚಕನಲ್ಲ ! ಮೂರು ದರುಶನಕ್ಕೆ ಮುಯ್ಯಾನುವನಲ್ಲ
ವೇದ ಶಾಸ್ತ್ರಾಗಮ ಪುರಾಣ ಛಂದಸ್ಸು
ನಿಘಂಟುಗಳೆಂಬುವಕ್ಕೆ ಭೇದಕನಲ್ಲ
ಅದೆಂತೆಂದಡೆ:ಅವರ ಅಂಗದ ಮೇಲೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ. ಪ್ರಸಾದವಿಲ್ಲ ಪಾದೋದಕವಿಲ್ಲದ ಭಾಷೆ. ಆ ಗುರು ಲಿಂಗ ಜಂಗಮ ಪ್ರಸಾದ ಪಾದೋದಕ ಏಕಾರ್ಥವಾದ ಕಾರಣ ಪ್ರಾಣಿಗಳೆಲ್ಲವು ಪ್ರಣಾಮಂಗೆಯ್ಯುತ್ತಿದ್ದವು
ಜೀವಿಗಳೆಲ್ಲವು ಜಯ ಜೀಯಾ ಎನುತ್ತಿದ್ದುವು. ಆತ್ಮಂಗಳೆಲ್ಲ ಅನುವ ಬೇಡುತ್ತಿದ್ದವು. ಗುಹೇಶ್ವರಾ ಸಂಗನಬಸವಣ್ಣನ ಪಾದಕ್ಕೆ ಈರೇಳುಭುವನವೆಲ್ಲವೂ ಜಯ ಜೀಯಾ ಎನುತ್ತಿದ್ದವು.