ಆವ ಕುಲವಾದಡೇನು ಶಿವಲಿಂಗವಿದ್ದವನೆ ಕುಲಜನು, ಕುಲವನರಸುವರೆ ಶರಣರಲ್ಲಿ, ಜಾತಿಸಂಕರನಾದ ಬಳಿಕ ಶಿವಧರ್ಮಕುಲೇಜಾತಃ ಪುನರ್ಜನ್ಮ ವಿವರ್ಜಿತಃ± ಉಮಾ ಮಾತಾ ಪಿತಾ ರುದ್ರ ಐಶ್ವರಂ ಕುಲಮೇವ ಚ± ಎಂದುದಾಗಿ, ಒಕ್ಕುದ ಕೊಂಬೆನವರಲ್ಲಿ, ಕೂಸ ಕೊಡುವೆ. ಕೂಡಲಸಂಗಮದೇವಾ, ನಂಬುವೆ ನಿಮ್ಮ ಶರಣನು.
ಆವ ಕುಲವಾದಡೇನು ಶಿವಲಿಂಗವಿದ್ದವನೆ ಕುಲಜನು
ಕುಲವನರಸುವರೆ ಶರಣರಲ್ಲಿ
ಜಾತಿಸಂಕರನಾದ ಬಳಿಕ ಶಿವಧರ್ಮಕುಲೇಜಾತಃ ಪುನರ್ಜನ್ಮ ವಿವರ್ಜಿತಃ± ಉಮಾ ಮಾತಾ ಪಿತಾ ರುದ್ರ ಐಶ್ವರಂ ಕುಲಮೇವ ಚ± ಎಂದುದಾಗಿ
ಒಕ್ಕುದ ಕೊಂಬೆನವರಲ್ಲಿ
ಕೂಸ ಕೊಡುವೆ. ಕೂಡಲಸಂಗಮದೇವಾ
ನಂಬುವೆ ನಿಮ್ಮ ಶರಣನು.