ಆದಿಯ ಮುಟ್ಟಿಬಂದ ಶರಣಂಗೆ ಬದ್ಧ(ಬಂಧ?)ವಿಲ್ಲಯ್ಯಾ. ಜನ್ಮಕೋಟಿ ಕ್ರೂರಕರ್ಮವ ಮಾಡಿದವಂಗೆ ಸೋಂಕಿನ ಸೊಬಗ ಹೇಳಲಿ(ಲೇ?)ಕೆ ? ಅಂಗದಲ್ಲಿ ಲಿಂಗ ಸೋಂಕಿದ ಶರಣಂಗೆ ಕಾಯದೊಳಗುಳ್ಳ ಕರಣಂಗಳು ಕಳಾಕುಳ ಕಳಾಭೇದವಯ್ಯಾ ಸುಖದ ಸೋಂಕಿನ ಸೊಬಗ ಇನ್ನಾರಿಗೆಯೂ ಹೇಳಲಿಲ್ಲ ಗುಹೇಶ್ವರ.