ಆಲಿಕಲ್ಲ ನಡುವೆ ಆರಯ್ಯಾ ಅಗ್ನಿಯನಿರಿಸಿದವರು ? ಅದು ನಂದದೆ ಉರಿಯದೆ ನಿಂದ ಪರಿಯ ನೋಡಾ ! ಮನಪವನಗಳ ಅಡುಗಬ್ಬನಿಕ್ಕಿ ಅಗ್ನಿಯ ಪಟುಮಾಡಬಲ್ಲವರನೊಬ್ಬರನೂ ಕಾಣೆ ! ಹಸಿಯಡಗನೆ ಹಿಡಿದು ಹಸಿದು ಸತ್ತರು. ಗುಹೇಶ್ವರಲಿಂಗದಲ್ಲಿ ಪ್ರಾಣಲಿಂಗಿಗಳಪೂರ್ವ !