ಆಕಾಶದಂತರಂಗದಲ್ಲಿ ತೋರುವ ಸಕಲ

ವಿಕಿಸೋರ್ಸ್ದಿಂದ



Pages   (key to Page Status)   


ಆಕಾಶದಂತರಂಗದಲ್ಲಿ ತೋರುವ ಸಕಲ ವರ್ಣಂಗಳ ವರ್ಣಿಸುವರು
ನಿರವಯದ ನಿಲವನೆತ್ತ ಬಲ್ಲರು ? ಅರಿವನಾಶ್ರಯಿಸಿ ಮನವ ಮುಂದುಗೊಂಡು ನೆನಹಿಂಗೆ ಗುರಿಯಾದವರೆಲ್ಲರೂ ನಿರವಯದ ನಿಲವನೆತ್ತ ಬಲ್ಲರು ? ವರ್ಣನಾಮವಳಿಯದಾಗಿ. ಆಕಾಶದಂತರಂಗ ಬಹಿರಂಗವೆನಲಿಲ್ಲದ ನಿರವಯವು ! ಗುಹೇಶ್ವರನೆನಲಿಲ್ಲದ ನಿಲವಿಗೆ ಸೊಲ್ಲು ಸಲ್ಲುವುದೆ ?