ನಚ್ಚುಮಚ್ಚಿನ ಲಿಂಗವ ಗ್ರಹಿಸಿ ಮಚ್ಚು ಒಳಗೊಂಡಿತ್ತಯ್ಯಾ. ಕರ್ಪುರದ ಕರಡಿಗೆಯ ಘಾಸಿಮಾಡಿದಂತಾಯಿತ್ತು. ಲಿಂಗಾನುಭಾವಿಗಳ ಸಂಗದಿಂದ ನಾನು ಕಣ್ದೆರೆದೆನು ಕಾಣಾ ಗುಹೇಶ್ವರಾ.