ಆಯತ ಸ್ವಾಯತ ಸನ್ನಹಿತನಾಗಿ ಆರಾಧ್ಯಲಿಂಗದಲ್ಲಿ ಅನುಭಾವಿಯಾಗಿಪ್ಪನು ಬಸವಣ್ಣನು. ಜಂಗಮಲಿಂಗ ಪ್ರಾಣಿಯಾಗಿ ನಿಷ್ಪ್ರಾಣವಾಗಿಪ್ಪನು ಬಸವಣ್ಣನು. ಗುಹೇಶ್ವರಲಿಂಗದಲ್ಲಿ ಸಂಗನಬಸವಣ್ಣನ ಆಚಾರದ ಪರಿ ನಿನಗಲ್ಲದೆ ಅರಿಯಬಾರದು. ಎನಗೊಮ್ಮೆ ತಿಳುಹಿಕೊಡಾ ಚೆನ್ನಬಸವಣ್ಣಾ.