ವಿಷಯಕ್ಕೆ ಹೋಗು

ಸ್ವಾನುಭಾವದ ಬೆಳಗಿನಲ್ಲಿ ಒಂದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸ್ವಾನುಭಾವದ ಬೆಳಗಿನಲ್ಲಿ ಒಂದು ಬೆಕ್ಕು ಹುಟ್ಟಿತ್ತು. ಆ ಬೆಕ್ಕಿನ ತಲೆಯ ಮೇಲೊಂದು ಗಿರಿ ಹುಟ್ಟಿತ್ತು. ಗಿರಿಯ ಮೇಲೆರಡು ರತ್ನ ಹುಟ್ಟಿದವು. ಆ ರತ್ನಂಗಳನರಸಿಕೊಂಡು ಬರಲು
ಅವು ತನ್ನನವಗ್ರಹಿಸಿದವು. ಒಂದು ರತ್ನ ಅಂಗವನವಗ್ರಹಿಸಿತ್ತು
ಮತ್ತೊಂದು ರತ್ನ ಪ್ರಾಣವನವಗ್ರಹಿಸಿತ್ತು. ಆ ರತ್ನಂಗಳ ಪ್ರಭೆ ತಾನಾದ ನಮ್ಮ ಗುಹೇಶ್ವರನ ಶರಣ ಸಿದ್ಧರಾಮಯ್ಯದೇವರ ನಿಲವಿಂಗೆ ನಮೋ ನಮೋ ಎನುತಿರ್ದೆನಯ್ಯಾ ಚೆನ್ನಬಸವಣ್ಣಾ.