ಕ್ಷೀರಸಾಗರದೊಳಗಿರ್ದ ಹಂಸೆಗೆ ಹಾಲ ಬಯಸಲುಂಟೆ ? ಪುಷ್ಪದೊಳಗಿರ್ದ ತುಂಬಿಗೆ ಪರಿಮಳವನರಸಲುಂಟೆ ? ತಾವು ಲಿಂಗದೊಳಗಿರ್ದು ಬೇರೆ ಇತರ ಕಾಮ್ಯಾರ್ಥದೊಳಗಿರ್ಪ ಭ್ರಾಂತರನೇನೆಂಬೆನಯ್ಯಾ ಗುಹೇಶ್ವರಾ.