ಆಗ್ಘವಣಿ ಪತ್ರೆ ಪುಷ್ಪ ಧೂಪ ದೀಪ ನಿವಾಳಿಯಲ್ಲಿ ಪೂಜಿಸಿ ಪೂಜಿಸಿ ಬಳಲುತ್ತೈದಾರೆ. ಏನೆಂದರಿಯರು ಎಂತೆಂದರಿಯರು. ಜನ ಮರುಳೊ ಜಾತ್ರೆ ಮರುಳೊ ಎಂಬಂತೆ; ಎಲ್ಲರೂ ಪೂಜಿಸಿ ಏನನೂ ಕಾಣದೆ ಲಯವಾಗಿ ಹೋದರು ಗುಹೇಶ್ವರಾ.