ಹಗಲಿರುಳ್ಗಳಿಲ್ಲದಂದು ಯುಗಜುಗಂಗಳು ಮರಳಿ ಮರಳಿ ತಿರುಗದಂದು ಗಗನ ಮೇರು ಕೈಲಾಸಂಗಳಿಲ್ಲದಂದು ಖಗ ಮೃಗ ಶೈಲ ವೃಕ್ಷಂಗಳಿಲ್ಲದಂದು ಅಜಹರಿಸುರಾಸುರ ಮನುಮುನಿಗಳಿಲ್ಲದಂದು ಜಗದ ಲೀಲಾವೈಭವಂಗಳೇನೂ ಇಲ್ಲದಂದು ಅಖಂಡೇಶ್ವರಾ ನಿಮ್ಮ ನೀವರಿಯದೆ ಅನಂತಕಾಲವಿರ್ದಿರಂದು.