ವಿಷಯಕ್ಕೆ ಹೋಗು

ಕಬ್ಬುನದ ಗುಂಡಿಗೆಯಲ್ಲಿ ರಸದ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಬ್ಬುನದ ಗುಂಡಿಗೆಯಲ್ಲಿ ರಸದ ಭಂಡವ ತುಂಬಿ
ಹೊನ್ನ ಮಾಡ ಬಲ್ಲಡೆ ಅದು ಪರುಷ ಕಾಣಿರಣ್ಣಾ. ಲಿಂಗ ಬಂದು ಉಂಬಡೆ ಪ್ರಸಾದಕಾಯವಪ್ಪಡೆ
ಅಂದಂದಿಂಗೆ ಭವಕರ್ಮ ಮುಟ್ಟಲಮ್ಮದು ಕಾಣಿರೆ. ಆದಿಯ ಪ್ರಸಾದಕ್ಕೆ ಬಾಧೆಯಿಲ್ಲ ಕಾಣಿರೆ. ಶಶಿಯಲ್ಲಿ ಕರಗದು ಬಿಸಿಲಲ್ಲಿ ಕೊರಗದು
ರಸವುಂಡ ಹೊನ್ನು _ಗುಹೇಶ್ವರಾ ನಿಮ್ಮ ಶರಣ !