ಮತಿಯೊಳಗೆ ದುರ್ಮತಿ ಹುಟ್ಟಿ
ಕಲಿ ಗಸಣಿಗೊಳಗಾದ ಪರಿಯ ನೋಡಾ ! ಜ್ಞಾನವನು ಅಜ್ಞಾನ ಬಂದು ನುಂಗಿದಡೆ
ಭಾನು ಗ್ರಹಣಕ್ಕೆ ಒಳಗಾದಂತೆ ಆದುದಲ್ಲಾ ! ಕ್ಷೀರವುಳ್ಳ ಪಶು ಕರುವನಗಲಿ ಅರಿಯದ ಮೋಹದಂತಿದ್ದುದಲ್ಲಾ. ಹೇಳುವಲ್ಲಿ ಯುಕ್ತ ಕೇಳುವಲ್ಲಿ ಮುಕ್ತನೆಂಬುದೆಲ್ಲವೂ
ಅಜ್ಞಾನಭಾವಕ್ಕೆ ಬಂದುದಲ್ಲಾ ! ನೀರ ಮೇಲಣ ಲಿಪಿಯ ಓದಬಲ್ಲವರುಂಟೆ ? ಸಾರಾಯ ವೇದ್ಯರಿಗಲ್ಲದೆ ? ಕನ್ನಡಿಯೊಳಗೆ ನೋಡೆ ಭಿನ್ನವಿದ್ದುದೆ ಅಯ್ಯಾ ? ತನ್ನಕಣ್ಣಿಂಗೆ ಕಾಣದಂತೆ ಇದ್ದಿತ್ತು ದರ್ಪಣದೊಳಗಣ ಬೆಳಗು. ಬೆಳಗಿನೊಳಗಣ ಬೆಳಗು
ಗುಹೇಶ್ವರನಿಪ್ಪೆಡೆಯ ತಿಳಿದು ನೋಡಿರೆ !