ಸುಳಿಯ ಬಲ್ಲಡೆ ಸುಳುಹೆ ಲೇಸಯ್ಯಾ. ಗಮನವಿಲ್ಲದೆ ಸುಳಿಯ ಬಲ್ಲಡೆ ನಿರ್ಗಮನಿಯಾಗಿ ನಿಲ್ಲಬಲ್ಲಡೆ ಅದಕ್ಕದೆ ಪರಿಣಾಮ ಅದಕ್ಕದೆ ಸಂತೋಷ. ಗುಹೇಶ್ವರಲಿಂಗದಲ್ಲಿ ಅವರ ಜಗದಾರಾಧ್ಯರೆಂಬೆ.