ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ ಆ ಸುಳುಹಾಗಿ ಸುಳಿಯಬೇಕು. ನಿಂದಡೆ ನೆಟ್ಟನೆ ಭಕ್ತನಾಗಿ ನಿಂದು ಸಹಜ ಮಾಟವ ಮಾಡಬೇಕು. ಸುಳಿದಡೆ ನೆಟ್ಟನೆ ಪರಮಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಾಗಲರಿಯದ ಸುಳಿದು ಜಂಗಮವಾಗಲರಿಯದ ಉಭಯಭ್ರಷ್ಟರನೇನೆಂಬೆನಯ್ಯಾ ಗುಹೇಶ್ವರಾ.