ಸಕಲ ಕರಣಂಗಳನು ಬಕುತಿಯ ಜ್ವಾಲೆಯಲ್ಲಿ ಸುಟ್ಟು ಯುಕುತಿಯ ವಿಭೂತಿಯ ಧರಿಸಲು ಮುಕುತಿಯಹುದಕೆ ಸಂದೇಹವಿಲ್ಲ. ಇದು ಕಾರಣ ಶಿವಸಂಬಂಧವಾದ ಶ್ರೀ ವಿಭೂತಿಯನೊಲಿದು ಧರಿಸುತಿರ್ದೆನು ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.