ಹಾಲ ತೊರೆಗೆ ಬೆಲ್ಲದ ಕೆಸರು ಸಕ್ಕರೆಯ ಮಳಲು ತವರಾಜದ ನೊರೆ ತೆರೆಯಂತೆ ಆದ್ಯರ ವಚನವಿರಲು ಬೇರೆ ಬಾವಿಯ ತೋಡಿ ಉಪ್ಪನೀರನುಂಬವನ ವಿಧಿಯಂತೆ ಆುತ್ತೆನ್ನ ಮತಿ ಕೂಡಲಸಂಗಮದೇವಾ. 291