ಅಂಗವಿಲ್ಲಾಗಿ ಅನ್ಯಸಂಗವಿಲ್ಲ ಅನ್ಯಸಂಗವಿಲ್ಲಾಗಿ ಮತ್ತೊಂದ ವಿವರಿಸಲಿಲ್ಲ. ಮತ್ತೊಂದ ವಿವರಿಸಲಿಲ್ಲಾಗಿ ನಿಸ್ಸಂಗವಾಯಿತ್ತಯ್ಯಾ. ಗುಹೇಶ್ವರಾ ನಿಮ್ಮ ನಾಮವಿಂತುಟಯ್ಯಾ