ಅಂದೊಮ್ಮೆ ಧರೆಯ ಮೇಲೆ ಉದಕವಿಲ್ಲದಂದು ಕೆಳಯಿಂಕೆ ಪಾದವ ನೀಡಿದೆಯಲ್ಲಾ ಬಸವಣ್ಣ ಧರೆಯ ತಾಗಿದ ಪಾದವ ಧಿಗಿಲನೆ ಎತ್ತಲು ಭುಗಿಲೆನೆ ಉದಕವೆದ್ದು ನಿಮ್ಮ ಉರಸ್ಥಲಕೆ ಬಾರದೆ ? ಕನಲಿ ಎದ್ದು ಅಂಕೆಗೆ (ಆಚೆಗೆ ?) ನಿಂದು ನೋಡಲು ಸಪ್ತ ಸಾಗರಂಗಳೆಲ್ಲವು ನಿಮ್ಮ ಕಿರುಪಾದದಲ್ಲಿ ಅಡಗವೆ ಬಸವಣ್ಣಾ ? ಅದನೆಂತು ಕೊಡಬಹುದು
ಅದನೆಂತು ಕೊಳಬಹುದು ? ನಮ್ಮ ಗುಹೇಶ್ವರಲಿಂಗಕ್ಕೆ ನಿಮ್ಮ ಪಾದೋದಕವೆ ಮಜ್ಜನ ಕಾಣಾ ಸಂಗನಬಸವಣ್ಣ.