ಅಗ್ನಿಯೆ ಅಂಗವಾದ ಪ್ರಸಾದಿಗೆ ನಿರಹಂಕಾರವೆ ಹಸ್ತ. ಆ ಹಸ್ತಕ್ಕೆ ಇಚ್ಛಾಶಕ್ತಿ
ಆ ಶಕ್ತಿಗೆ ಶಿವಲಿಂಗ
ಆ ಶಿವಲಿಂಗಕ್ಕೆ ನೇತ್ರೇಂದ್ರಿಯವೆ ಮುಖ
ಆ ಮುಖಕ್ಕೆ ಸುರೂಪುಪದಾರ್ಥ ; ಆ ಪದಾರ್ಥವನು ನೇತ್ರದಲ್ಲಿಹ ಶಿವಲಿಂಗಕ್ಕೆ ಸಾವಧಾನಭಕ್ತಿಯಿಂದರ್ಪಿಸಿ
ಆ ಸುರೂಪುಪ್ರಸಾದವನು ಪಡೆದು ಸುಖಿಸುವಾತನೆ ಪ್ರಸಾದಿಯಯ್ಯಾ ಅಖಂಡೇಶ್ವರಾ.