Pages (key to Page Status)
ಅಡವಿಯ ಹುಲ್ಲ ಮೇದ ಪಶು ಮಡುವಿನಗ್ಛವಣಿಯ ಕುಡಿದು ನಡುಬೀದಿಯಲ್ಲಿ ಬರುತ್ತಿರಲು ಕಡೆಯಲಿರ್ದ ಹುಲಿ ಬಂದು ಹಿಡಿಯಲು `ನಿನ್ನೊಡವೆಯನೇನ ಬಳಸಿಕೊಂಡೆನೋ' ಎಂದು ತನ್ನೊಡೆಯನ ಕರೆಯಲು ಹಿಡಿದ ಹುಲಿ ಬಿಟ್ಟೋಡಿತ್ತು ನೋಡಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.